ಬೆಂಗಳೂರು : ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನ ಬೆದರಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ದೀಕ್ಷಿತ್ ಹಾಗೂ ಮಣಿಕಂಠ ಏಪ್ರಿಲ್ 11ರಂದು ಸಂಜೆ 5 ಗಂಟೆ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ್ದ ಆರೋಪಿಗಳು ಕುತ್ತಿಗೆ ಚಾಕು ಇಟ್ಟು ಚಿನ್ನದ ಸರ, ನಗದು, ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿತರಿಂದ 1.25 ಲಕ್ಷ ಮೌಲ್ಯದ 11 ಗ್ರಾಂ ಚಿನ್ನದ ಸರ, ಎರಡು ದ್ವಿಚಕ್ರ ವಾಹನ, ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
Kshetra Samachara
29/05/2022 01:13 pm