ಬೊಮ್ಮನಹಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಗಾಡಿಗಳನ್ನು ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೇಗೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಮೂಲದ ಹನುಮಂತ ರೆಡ್ಡಿ(34) ಬಂಧಿತ ಆರೋಪಿ. ಇನ್ನು ಬಂಧಿತ ಅರೋಪಿಯಿಂದ 45 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ..
ಬಂಧಿತ ಆರೋಪಿ ಹನುಮಂತ ರೆಡ್ಡಿ ಬೈಕ್ ಕೀ ಲಾಕ್ ಮುರಿದು ಕಳ್ಳತನ ಮಾಡ್ತಿದ್ದ .ಅದಲ್ಲದೇ ಕದ್ದ ಬೈಕ್ ನ ಹಳ್ಳಿ ಜನರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡ್ತಿದ್ದ. ಇನ್ನೂ ಬಂಧಿತ ಆರೋಪಿಗಳ ವಿರುದ್ಧ ಪುಟ್ಟೇನಹಳ್ಳಿ, ಜೆ.ಪಿ ನಗರ, ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣಗಳು ದಾಖಲಾಗಿದೆ.. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್
PublicNext
04/06/2022 07:05 pm