ಬೆಂಗಳೂರು: ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯವರನ್ನು ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಬ್ರಹ್ಮನಗರದಲ್ಲಿ ನಗರದಲ್ಲಿ ಘಟನೆ ನಡೆದಿದ್ದು, ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಂಜು ಅಂಜನ್ ಕಣಿಯಾರ್‌ನನ್ನು ಪ್ರೀತಿಸಿ ಮದುವೆಯಾಗಿದ್ದಳು. ನಿನ್ನೆ (ಶನಿವಾರ) ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜನ್ ಮನೆಯವರು ಹೇಳಿದ್ದಾರೆ. ಆದರೆ ಅಂಜು ಮನೆಯವರು ಮಾತ್ರ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ಗಂಡನ ಮನೆಯವರು ಕಿರುಕುಳ ನೀಡುತ್ತಿರುವ ಬಗ್ಗೆ 15 ದಿನಗಳ ಹಿಂದಷ್ಟೇ ಅಂಜು ಪೋಷಕರ ಬಳಿ ಹೇಳಿಕೊಂಡಿದ್ದಳಂತೆ. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಂಜು ಕುಟುಂಬದಸ್ಥರು ಅಂಜನ್ ಮತ್ತು ಅವರ ಕುಟುಂಬಸ್ಥರ ಮೇಲೆ ಕೊಲೆ ಆರೋಪ ಮಾಡುತ್ತಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿಯಾಗಿದ್ದ ಅಂಜು ಕಳೆದ ಐದು ವರ್ಷಗಳಿಂದ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ನಾಲ್ಕು ತಿಂಗಳ ಹಿಂದೆ ಲವ್ ಮಾಡಿ ಮದುವೆ ಆಗಿದ್ದರು. ನಿನ್ನೆ ಅಂಜುಗೆ ಮನೆಯವರು ಕಾಲ್ ಮಾಡಿದರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತ ವಿಷಯ ತಿಳಿಸಿದ್ದಾರೆ.
ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಅಂತ ಅಂಜು ಕುಟುಂಬಸ್ಥರ ಆರೋಪಿದ್ದಾರೆ. ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಮೃತಳ ಪೋಷಕರ ದೂರು ನೀಡಿದ್ದು ಪೊಲಿಸ್ರು ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
PublicNext
05/06/2022 01:43 pm