ಬೆಂಗಳೂರು: ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚೋಟು ಬಂಧಿತ ಡ್ರಗ್ ಪೆಡ್ಲರ್. ಈತ ಹೊಸಕೋಟೆಯಲ್ಲಿರುವ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಗಾಂಜಾ ತರಿಸಿಕೊಂಡು ಸಿಲಿಕಾನ್ ಸಿಟಿಯಲ್ಲಿ ವ್ಯಾಪಾರ ಮಾಡುತ್ತಿದ್ದ. ಪರಿಚಯಸ್ಥರಿಗೆ 10 ಗ್ರಾಂ ಗಾಂಜಾಗೆ 300 ರೂನಿಂದ 500ರೂ ಪಡೆದುಕೊಳ್ಳುತ್ತಿದ್ದ. ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ. ಈ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಬಂಧಿತನಿಂದ 3 ಲಕ್ಷ ಮೌಲ್ಯದ 5.30 ಕೆಜಿ ಗಾಂಜಾ ಸೇರಿ ಒಂದು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Kshetra Samachara
10/06/2022 01:12 pm