ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿ ಶೀಟರ್ ಪವನ್ ಅಲಿಯಾಸ್ ಟಾಕ್ಲಾ ಹಾಗೂ ಆತನ ಐವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿಗಳು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ ನಗರದ ಬಿಡಬ್ಲ್ಯೂ ಎಸ್ ಎಸ್ ಬಿ ಪೈಪ್ ಲೈನ್ ರಸ್ತೆಯಲ್ಲಿ ಮಾರಕಾಸ್ತ್ತ ಹಿಡಿದು ದಾರಿಹೋಕರನ್ನು ದೋಚಲು ಸಂಚು ರೂಪಿಸಿದ್ದರು.
ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ಮಾರಕಾಸ್ತ್ತಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಆರು ಮಂದಿ ವಿರುದ್ಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
10/06/2022 01:45 pm