ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಸಿಬಿ ಪೊಲೀಸರಿಂದ ನೈಜೀರಿಯನ್ ಮಾದಕ ದಂಧೆಕೋರನ ಬಂಧನ

ಬೆಂಗಳೂರು: ವಿದ್ಯಾರ್ಥಿ ವೀಸಾದಲ್ಲಿ ಭಾರತಕ್ಕೆ ಬಂದು ಮಾದಕ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಆರೋಪಿಯನ್ನ ಸಿಸಿಬಿಯ ಮಾದಕ ಪದಾರ್ಥ ನಿಗ್ರಹ ದಳ ಬಂಧಿಸಿದೆ. ಜಾನ್ ನೆರೋ ಬಂಧಿತ ಆರೋಪಿ.

ಎಂಟು ವರ್ಷಗಳ ಹಿಂದೆ ಭಾರತಕ್ಕೆ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿ ಓದು ಮುಗಿದ ಬಳಿಕ ಹಣ ಗಳಿಸಲು ಮಾದಕ ದಂಧೆಗಿಳಿದಿದ್ದ. ವೀಸಾ ಅವಧಿ ಉಲ್ಲಂಘಿಸಿದ ಕಾರಣಕ್ಕೆ ಈ ಹಿಂದೆ ಸಂಪಿಗೆಹಳ್ಳಿ ಪೊಲೀಸರಿಂದ ಬಂಧನವಾಗಿ ಶಿಕ್ಷೆ ಅನುಭವಿಸಿ ಹೊರಬಂದಮೇಲೂ ಸ್ವದೇಶಕ್ಕೆ ಮರಳದೇ ಮತ್ತದೇ ದಂಧೆ ಮುಂದುವರೆಸಿದ್ದ. ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿ ಮಾದಕ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದು 1.5 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್, ಲ್ಯಾಪ್ ಟಾಪ್, ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

Edited By : PublicNext Desk
Kshetra Samachara

Kshetra Samachara

19/06/2022 12:41 pm

Cinque Terre

1.96 K

Cinque Terre

0