ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಶರಣಾದ ಘಟನೆ ತಡರಾತ್ರಿ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದರ್ಶನ್ ಶೆಟ್ಟಿ (45) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಸಬ್ ಇನ್ಸ್‌ಪೆಕ್ಟರ್ ಆಗಿದ್ದಾರೆ. ಯಶವಂತಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸುದರ್ಶನ ಶೆಟ್ಟಿ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದರು. ನಿವೃತ್ತ ಯೋಧನಾಗಿದ್ದ ಸುದರ್ಶನ್ ಶೆಟ್ಟಿ ಸೇನಾ ಕೋಟಾದಡಿ ಪೊಲೀಸ್ ಇಲಾಖೆ ಸೇರಿದ್ದರು.
ಕೆಲ ವರ್ಷಗಳ ಹಿಂದೆ ಕುಡಿತದ ಚಟಕ್ಕೆ ಒಳಗಾಗಿದ್ದ ಸುದರ್ಶನ್ ಶೆಟ್ಟಿ ಚಟ ಬಿಡಲು ರಿಹ್ಯಾಬಿಟೇಶನ್ ಸೆಂಟರ್ ಗೂ ಸೇರಿದ್ದರು. ಮನಸ್ಥಿತಿ ಸರಿಯಿಲ್ಲದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸದ್ಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
20/06/2022 10:52 am