ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ ಇಬ್ಬರು ನೈಜೀರಿಯಾ ಡ್ರಗ್ ಪೆಡ್ಲರ್ಸ್ ಅಂದರ್

ಬೆಂಗಳೂರು: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೇರಿಯಾ ಮೂಲದ ಇಬ್ಬರು ಪ್ರಜೆಗಳನ್ನು ಬಂಧಿಸಿದ್ದಾರೆ.

ಡೆನಿಯಲ್ ಹಾಗೂ ಖಾಲಿಫ ಅಬುದುಲಿಹಿ ಬಂಧಿತರು. ಈ ಇಬ್ಬರು 5 ವರ್ಷಗಳ ಹಿಂದೆ ವಿದ್ಯಾರ್ಥಿ ವಿಸಾ ಪಡೆದು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ ಬಿಟಿ ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿ 1 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಗೆ 5 ಸಾವಿರದಿಂದ 6‌ ರೂಪಾಯಿ ಪಡೆಯುತ್ತಿದ್ದರು. ಸದ್ಯ ಆರೋಪಿಗಳು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು, ಇಬ್ಬರನ್ನು ಬಂಧಿಸಿ 8 ಲಕ್ಷ ಮೌಲ್ಯದ 80 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್ ಫೋನ್‌ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

24/06/2022 12:48 pm

Cinque Terre

764

Cinque Terre

0

ಸಂಬಂಧಿತ ಸುದ್ದಿ