ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 10 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದ ಹಿನ್ನೆಲೆ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ‌ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಲೋಕಾಯುಕ್ತಕ್ಕೆ ಬಂದಿತ್ತು‌.‌ ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು ಇಂದು ಹತ್ತು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ಬಳಿಕ ಆಂತರಿಕ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಲೋಕಾಯುಕ್ತ ಅಧಿಕಾರಿಗಳಯ ಸಿದ್ಧತೆ ನಡೆಸಿದ್ದಾರೆ.

ಯಶವಂತಪುರ, ಕೆ.ಆರ್.ಪುರ,‌ ಜಯನಗರ, ನಾಗರಭಾವಿ, ಬೊಮ್ಮನಹಳ್ಳಿ, ಗಂಗಾನಗರ, ಬ್ಯಾಟರಾಯನಪುರ, ಮಾದನಾಯಕನಹಳ್ಳಿ, ಆರ್.ಆರ್.ನಗರ, ಅತ್ತಿಬೆಲೆ ಹಾಗೂ ಜಿಗಣಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ವಿ.ಅಶೋಕ್ ನೇತೃತ್ವದಲ್ಲಿ 10 ಡಿಎಸ್ಪಿ 20 ಮಂದಿ ಇನ್ ಸ್ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Vijay Kumar
PublicNext

PublicNext

28/06/2022 10:53 pm

Cinque Terre

23.73 K

Cinque Terre

1

ಸಂಬಂಧಿತ ಸುದ್ದಿ