ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ದುಷ್ಕರ್ಮಿಗಳು ಕದ್ದು ಪರಾರಿಯಾಗಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂತ ನಗರದಿಂದ ಹೆಬ್ಬಗೋಡಿ ಮಾರ್ಗವಾಗಿ ಇಬ್ಬರು ಮಹಿಳೆಯರು ನಡೆದು ಬರುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಓರ್ವ ಅಸಾಮಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿ ಹೊಂಚು ಹಾಕಿ ಮಹಿಳೆ ಚಿನ್ನದ ಸರ ಕಿತ್ತು ಪರಾರಿಯಾಗಿದ್ದು, ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kshetra Samachara
08/07/2022 09:41 pm