ಬೆಂಗಳೂರು : ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದ ಆಗಂತುಕರು ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣ ದೋಚಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಗೆ ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದಿದ್ದ ಮೂವರು ದರೋಡೆಕೋರರು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಜ್ಯೋತಿಷಿ ಮನೆಯಲ್ಲೇ ಇದ್ರು.ನಂತ್ರ ಪ್ರಮೋದ್ ಕೈ ಕಾಲು ಕಟ್ಟಿ ಹಲ್ಲೆ ಮಾಡಿ ಮನೆಯಲ್ಲಿದ್ದ 400 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೆಂಗೇರಿ ಠಾಣಾ ಪೊಲೀಸರು ಹಾಗೂ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
PublicNext
10/07/2022 09:25 am