ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಪ್ಪು ನಗರ ವಾರ್ಡ್ ಮಾಜಿ ಕಾರ್ಪೋರೇಟರ್ ಅಯುಬ್ ಖಾನ್ ಗೆ ಅಣ್ಣನ ಮಗ ಮತೀನ್ ಖಾನ್ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಇಂದು (ಬುಧವಾರ) ಸಂಜೆ 7:30ರಿಂದ 7:45ರ ವೇಳೆ ಆಯುಬ್ ಖಾನ್ ಮೇಲೆ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಗಾಯಗೊಂಡಿರುವ ಬಿಬಿಎಂಪಿ ಮಾಜಿ ಸದಸ್ಯ ಆಯುಬ್ ಖಾನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮನೆಯವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ಪರಾರಿಯಾಗಿರುವ ಆರೋಪಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.
ಆರೋಪಿ ಹಾಗೂ ಆಯುಬ್ ಖಾನ್ ನಡುವೆ ಹಲವು ತಿಂಗಳಿಂದ ವೈಮನಸ್ಸು ಇತ್ತು ಎಂದು ಹೇಳಲಾಗುತ್ತಿದೆ. ನಿಖರವಾಗಿ ಯಾವ ವಿಚಾರಕ್ಕಾಗಿ ಜಗಳ ನಡೆದಿದೆ ಎಂಬುವುದು ತಿಳಿದುಬಂದಿಲ್ಲ ಎಂದು ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
Kshetra Samachara
13/07/2022 09:31 pm