ಆನೇಕಲ್: ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ
ಕೇರಳ ಮೂಲದ ಸನು ಕೊಲೆಯಾದ ಯುವಕ. ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಅಡ್ವಾನ್ಸ್ ಕಂಪನಿಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಸನು ಎಂಬ ಯುವಕ ನಿನ್ನೆ ಗುರುವಾರ ರಾತ್ರಿ 11ಗಂಟೆಗೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಮೂರುಜನ ದುಷ್ಕರ್ಮಿಗಳು ಯುವಕನನ್ನು ಅಡ್ಡಗಟ್ಟಿ ಚಾಕುಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪರಿಣಾಮ ಯುವಕ ಸನು ರಕ್ತಸ್ರಾವದಿಂದ ರಸ್ತೆಯಲ್ಲಿ ಸಾವನ್ನಪ್ಪಿದ್ದಾನೆ . ಇನ್ನು ರಸ್ತೆ ಪಕ್ಕದಲ್ಲಿರುವ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದ್ದು ಎಲ್ಲಾ ಅಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
15/07/2022 01:00 pm