ಅನೇಕಲ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಗಂಡನೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೂವಾಡಿಗರ ಬೀದಿಯಲ್ಲಿ ನಡೆದಿದೆ.
ಪ್ರೇಮ ಎಂಬಾಕೆ ಕೊಲೆಯಾದ ಮಹಿಳೆ. ಆರೋಪಿ ಗಂಡ ವೆಂಕಟೇಶ್ ಚಾರಿ ಕೈಮಗ್ಗ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರಂತೆ. ಹೆಂಡತಿ ಬೇರೆಯವನ ಜೊತೆ ಅಕ್ರಮ ಸಂಬಂಧದ ವಿಚಾರವಾಗಿ ಕಳೆದ ರಾತ್ರಿ ಗಲಾಟೆ ನಡೆದಿದ್ದಂತೆ. ಜಗಳ ವಿಕೋಪಕ್ಕೆ ತಿರುಗಿ ಗಂಡ ವೆಂಕಟಾಚಾರಿ ಪತ್ನಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನು ಆರೋಪಿ ವೆಂಕಟಾಚಾರಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
16/07/2022 03:37 pm