ಯಲಹಂಕ: ಕಾರು ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ KA 27 C 0471 ನಂಬರಿನ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ KA 40 F 1316 ನಂಬರಿನ KSRTC ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕ ಲೋಹಿತ್ ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇಂದು ಮುಂಜಾನೆ 3:15ಕ್ಕೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ BSF ಆರ್ಮಿ ಕ್ಯಾಂಪಸ್ ಬಳಿ ದುರಂತ ಸಂಭವಿಸಿದೆ. ಮಂತ್ರಾಲಯಕ್ಕೆ ಹೋಗಿ ಬೆಂಗಳೂರಿಗೆ ಬರುತ್ತಿದ್ದ KSRTC ಬಸ್‌ಗೆ ಬೆಂಗಳೂರಿನಿಂದ ಏರ್‌ಪೋರ್ಟ್ ಕಡೆಗೆ ತೆರಳುತ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಗುದ್ದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರು ಚಾಲಕನ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ..
Kshetra Samachara
21/07/2022 08:15 am