ವರದಿ - ಗಣೇಶ್ ಹೆಗಡೆ
ಬೆಂಗಳೂರು : ಸ್ನಾತಕೋತ್ತರ ಪದವಿ ಕೋರ್ಸಿಗೆ ಪ್ರವೇಶ ಪಡೆದಿರುವ ಹಲವು ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಈಗ ನೀವೆಲ್ಲರೂ ಪದವಿಯಲ್ಲಿ ಅನುತ್ತೀರ್ಣರಾಗಿದ್ದೀರಿ ಎಂದು ಹೇಳಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ವಿವಿಯ ಈ ಎಡವಟ್ಟಿನಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದು, ಆಗಿರುವ ಲೋಪವನ್ನು ತಕ್ಷಣ ಸರಿಪಡಿಸಲು ಆಗ್ರಹಿಸಿದ್ದಾರೆ.
ಚೆನ್ನಪಟ್ಟಣದಲ್ಲಿ ವ್ಯಾಸಂಗ ಮಾಡ್ತಿರುವ ವಿದ್ಯಾರ್ಥಿಗಳು ಪದವಿ ಮುಗಿಸಿ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದು ಮೊದಲ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸಿದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಮೊಬೈಲ್ ಗೆ ಮೆಸೆಜ್ ಬಂದಿದೆ.
ನೀವೆಲ್ಲರೂ ಪದವಿಯಲ್ಲಿ ಫೇಲ್ ಆಗಿದ್ದೀರಿ ಎಂದು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಮೆಸೆಜ್ ಬಂದಿದೆ.
ಆರೋಪ ಮಾಡುತ್ತಿರುವ ವಿದ್ಯಾರ್ಥಿಗಳು ಹೊಂದಿರುವ ದಾಖಲೆಗಳ ಪ್ರಕಾರ 2021ರಲ್ಲಿ ಪದವಿ ಕೋರ್ಸುಗಳಲ್ಲಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರು ವಿವಿಯಿಂದಲೇ ಪಡೆದಿರುವ ಅಂಕಪಟ್ಟಿಯೂ ಅವರ ಬಳಿ ಇದೆ. ವಿಶೇಷವೆಂದರೆ ಬಹಳಷ್ಟುಜನ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರ ಆಧಾರದ ಮೇಲೆಯೇ ಸ್ನಾತಕೋತ್ತರ ಪದವಿ ಪ್ರವೇಶ ಪಡೆದುಕೊಂಡಿದ್ದಾರೆ. ಕಾಲೇಜಿನವರು ಆ ವಿದ್ಯಾರ್ಥಿಗಳು ಮೊದಲ ವರ್ಷದ ಪರೀಕ್ಷೆಗೆ ಶುಲ್ಕ ಪಾವತಿಸಿಕೊಂಡು ಅನುಮೋದನೆಗೆ ವಿಶ್ವವಿದ್ಯಾಲಯಕ್ಕೆ ಕಳುಹಿಸಿದ್ದಾರೆ. ಈ ವೇಳೆ ಇಂತಹ ಘಟನೆ ನಡೆದಿದೆ.
ಇನ್ನು, ತಮಗಾಗಿರುವ ಅನ್ಯಾಯದ ಬಗ್ಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಆಗಿರುವ ಲೋಪವನ್ನು ಮೌಲ್ಯಮಾಪನ ವಿಭಾಗದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ದೂರು ನೀಡಲು ಹೋದರೆ ತಾಂತ್ರಿಕ ದೋಷದಿಂದ ಈ ರೀತಿ ಆಗಿದ್ದು, ಫೇಲ್ ಆಗಿದ್ದನ್ನು ಖಾತ್ರಿ ಪಡಿಸಿದೆ.
ಈ ವಿಚಾರವನ್ನು ಗಂಭೀರವಾಗಿ ಪಡೆದಿರುವ ವಿವಿಯು ತಾಂತ್ರಿಷವನ್ನು ಸರಿಪಡಿಸಲು ಪ್ರತ್ಯೇಖ ಸಮಿತಿ ರಚನೆ ಮಾಡಲಾಗಿದೆ. ಇನ್ನೂ ಕೋರ್ಟ್ ಮೊರೆ ಹೋಗಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.
Kshetra Samachara
22/07/2022 12:58 pm