ಬೆಂಗಳೂರು: ನಗರದಲ್ಲಿ ಆನ್ ಲೈನ್ ಸಾಲಗಾರರ ಕಿರುಕುಳಕ್ಕೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ.ಆನ್ ಲೈನ್ ಆ್ಯಪ್ ಸಾಲಗಾರರ ಹಾವಳಿಗೆ ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.ನಾಗದೇವನಹಳ್ಳಿಯ ನಂದಕುಮಾರ್ ಮೃತ ದುರ್ದೈವಿಯಾಗಿದ್ದು ಖಾಸಗಿ ಕೋಅಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡ್ತಿದ್ದ.ಆನ್ ಲೈನ್ ಆ್ಯಪ್ ಮೂಲಕ ಸಾಲ ಪಡೆದಿದ್ದ ನಂದಕುಮಾರ್ ಸಾಲ ಹಿಂದಿರುಗಿಸುವುದು ಸ್ವಲ್ಪ ತಡವಾಗಿದ್ದರಿಂದ ಆ್ಯಪ್ ನವರು ಮಾಮಸಿಕವಾಗಿ ಕಿರುಕುಳ ನೀಡಿದ್ರು.
ನಂದಕುಮಾರ್ ಪೋಟೋವನ್ನು ಅಶ್ಲೀಲವಾಗಿ ಮಾರ್ಪಡಿಸಿ ನಂದಕುಮಾರ್ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕಳುಹಿಸಲಾಗಿತ್ತು. ಇದ್ರಿಂದ ಮನನೊಂದಿದ್ದ ನಂದಕುಮಾರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆನ್ ಲೈನ್ ಆ್ಯಪ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದು ಬೆಂಗಳೂರು ಸಿಟಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
27/07/2022 06:18 pm