ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
18 ವರ್ಷದ ಧನುಷ್ ಬಂಧಿತ ಆರೋಪಿಯಾಗಿದ್ದು, ಈತ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಗ್ರೂಪ್ ಲೇಔಟ್ ಪಾರ್ಕ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ.
ಈ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಈತನನ್ನು ಬಂಧಿಸಿ ಆರೋಪಿಯಿಂದ 930 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂಧ್ರಪ್ರದೇಶದಿಂದ ಗಾಂಜಾ ತಂದು ಮಾರಾಟದಲ್ಲಿ ತೊಡಗಿದ್ದ. ವಾಟರ್ ಕ್ಯಾನ್ ಸಪ್ಲೈ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಸದ್ಯ ಧನುಷ್ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Kshetra Samachara
31/07/2022 12:49 pm