ಆನೇಕಲ್: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಇಗ್ಗಲೂರು ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಇಗ್ಗಲೂರು ಗ್ರಾಮದ ಹಾಸನಾಂಭ ಐಯ್ಯಂಗಾರ್ ಬೇಕರಿ ಮತ್ತು ಮಂಜುನಾಥ್ ಬಾರ್ ಸಮೀಪದಲ್ಲಿ ಆಕಾಶ್ ಎಂಬುವರಿಗೆ ಸೇರಿದ ದ್ವಿಚಕ್ರ ವಾಹನವನ್ನು ಕಳ್ಳರು ಕಳೆದ ರಾತ್ರಿ ಕದ್ದು ಪರಾರಿಯಾಗಿದ್ದು, ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಯಾಗಿದೆ.
ಇತ್ತೀಚಿನ ದಿನಗಳಲ್ಲಿ ಸೂರ್ಯನ ಹೊರ ಪೋಲಿಸ್ ಠಾಣೆ ವ್ಯಾಪಿಯಲ್ಲಿ ದ್ವಿಚಕ್ರವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಪೋಲಿಸರು ಕಡಿವಾಣ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
PublicNext
05/08/2022 07:37 pm