ಬೆಂಗಳೂರು: ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿ ದ್ವಾರಕಾನಗರದಲ್ಲಿ ಅಮರನಾಥ್ ಮೆಹತೋ (51) ಎಂಬ ಕಾರ್ಮಿಕನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಕೂಡಲೇ ಗಾಯಾಳು ಅಮರನಾಥ್ನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಬೇಕು ಎನ್ನುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಅಮರನಾಥ್ ಯಲಹಂಕದ ಮಾರುತಿನಗರದಲ್ಲಿ ವಾಸವಾಗಿದ್ದುಕೊಂಡು, ಗಾರೆ ಕೆಲಸ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಘಟನೆ ಸಂಬಂಧ ಮೃತನ ಮಗ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾನೆ. ದೂರಿನನ್ವಯ ಬಾಗಲೂರು ಪೊಲೀಸರು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
Kshetra Samachara
07/08/2022 12:34 pm