ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್ರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬೈಕ್ ಕಳ್ಳರು

ಬೆಂಗಳೂರು : ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡು ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಿಸಿದಾಗ ದ್ವಿಚಕ್ರ ವಾಹನ ಕಳುವು ಪ್ರಕರಣಗಳು ಬಯಲಾದ ಘಟನೆ ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಸರ್ ಷರೀಫ್ ಹಾಗೂ ಅಹಮದ್ ಖಾನ್ ಬಂಧಿತ ಆರೋಪಿಗಳಾಗಿದ್ದು,ಆಗಸ್ಟ್ 8ರಂದು ಮಧ್ಯಾಹ್ನ ಜಿ.ಕೆ.ವೇಲು ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಸ್ಕೂಟರ್ ತಳ್ಳಿಕೊಂಡು ಬರುತ್ತಿದ್ದ ಆರೋಪಿಗಳು ಗಸ್ತಿನಲ್ಲಿದ್ದ ಪುಲಿಕೇಶಿ ನಗರ ಠಾಣಾ ಪೊಲೀಸರನ್ನ ಕಂಡು ಸ್ಕೂಟರ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಆರೋಪಿಗಳನ್ನ ಸುತ್ತುವರಿದಿದ್ದ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಿಸಿದಾಗ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು. ಸದ್ಯ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು ಒಟ್ಟು 10 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಲಾಗಿದೆ.

Edited By : PublicNext Desk
Kshetra Samachara

Kshetra Samachara

10/08/2022 04:50 pm

Cinque Terre

2.11 K

Cinque Terre

0

ಸಂಬಂಧಿತ ಸುದ್ದಿ