ಬೆಂಗಳೂರು: ಸಿಲಿಕನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಯುವತಿಯನ್ನು ಭೇಟಿಗೆಂದು ಕರೆಸಿ ದೂರದ ಸಂಬಂಧಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ರಮೇಶ್ ಕಳೆದ 6ನೇ ತಾರೀಖು ಯುವತಿಯನ್ನ ಭೇಟಿ ಮಾಡಬೇಕು ಎಂದು ಕಬ್ಬನ್ ಪಾರ್ಕ್‌ಗೆ ಕರೆಸಿಕೊಂಡಿದ್ದ. ದೂರುದ ಸಂಬಂಧಿ ಅಪರೂಪಕ್ಕೆ ನಗರಕ್ಕೆ ಬಂದಿದ್ದಾನೆಂದು ಯುವತಿ ಕೂಡ ರಮೇಶನ ಮಾತು ನಂಬಿ ಕಬ್ಬನ್ ಪಾರ್ಕ್‌ಗೆ ತೆರಳಿದ್ದಳು. ಈ ಸಮಯವನ್ನ ದುರುಪಯೋಗಪಡಿಸಿಕೊಂಡ ರಮೇಶ ನನ್ನ ಮೇಲೆ ಮೃಗದಂತೆ ಎರಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ದೂರು ದಾಖಲಿಸಿದ್ದಾಳೆ.
ಘಟನೆಯಿಂದ ಶಾಕ್ ನಲ್ಲಿದ್ದ ಯುವತಿ ಮೂರು ದಿನದ ನಂತರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ರಮೇಶ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
PublicNext
11/08/2022 07:26 pm