ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಆಟೋ ಚಾಲಕರು

ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕನಿಗೆ ಆಟೋ ಡ್ರೈವರ್ ಚಾಲಕರು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಆಟೋ ಚಾಲಕರ ನಡುವೆ ಆಗಾಗ ಗಲಾಟೆ ಸರ್ವೇ ಸಾಮಾನ್ಯವಾಗಿದೆ. ಎಚ್ಎಸ್ಆರ್ ಲೇಔಟ್ ನ 2ನೇ ಹಂತದ ಮುಖ್ಯರಸ್ತೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕನನ್ನು ಅಡ್ಡಗಟ್ಟಿದ ಆಟೋ ಚಾಲಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಕೆಲ ವಾರಗಳ ಹಿಂದಷ್ಟೇ ಬೈಕ್ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ನಮ್ಮ ಮೇಲೆ ಸುಖಾಸುಮ್ಮನೆ ಹಲ್ಲೆ ಮಾಡುತ್ತಿದ್ದಾರೆ ಎಂದು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ರುರು. ಇದೆಲ್ಲ ಆದ ನಂತರ ಈಗ ಮತ್ತೆ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಹಲ್ಲೆ ಮಾಡಿದ್ದಾರಂತೆ. ಆದಷ್ಟು ಬೇಗ ಪೊಲೀಸರು ಮಧ್ಯಪ್ರವೇಶಿಸಿ ಇವರಿಬ್ಬರ ನಡುವೆ ನಡೆಯುತ್ತಿರುವ ಗಲಾಟೆಯನ್ನು ತಣ್ಣಗಾಗಿಸಬೇಕಿದೆ.

-ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Shivu K
PublicNext

PublicNext

12/08/2022 09:14 pm

Cinque Terre

32.29 K

Cinque Terre

0

ಸಂಬಂಧಿತ ಸುದ್ದಿ