ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬಳು ಮದುವೆಯಾಗಿ ಎರಡೂವರೆ ವರ್ಷಕ್ಕೆ ಅನುಮಾನಸ್ಪದವಾಗಿ ಸಾವನಪ್ಪಿದ್ದಾಳೆ. ಈ ಘಟನೆ ಬೆಂಗಳೂರು ಹೊರವಲಯ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊನಸಂದ್ರ ಬಿಎಸ್‌ಆರ್ ಬಡಾವಣೆಯಲ್ಲಿ ನಡೆದಿದೆ.
ಕನಕಪುರ ಮೂಲದ ಚೈತ್ರ ಅನುಮಾನಾಸ್ಪದವಾಗಿ ಸಾವನಪ್ಪಿದ ಗೃಹಿಣಿ. ಕನಕಪುರ ಮೂಲದ ಗೃಹಿಣಿ ಚೈತ್ರಳನ್ನು ಎರಡುವರೆ ವರ್ಷದ ಹಿಂದೆ ಗೋವಿಂದರಾಜು ಎಂಬವರಿಗೆ ಮದುವೆ ಮಾಡಿಕೊಟ್ಟಿದ್ದರು. ಸುಂದರವಾಗಿ ಸಂಸಾರ ನಡೆದಿತ್ತು. ಆದರೆ ಗುರುವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಚೈತ್ರ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇನ್ನು ಕುಟುಂಬಸ್ಥರು ಹಾಗು ತಂದೆ ವರದಕ್ಷಿಣೆ ಕಿರುಕುಳ ನೀಡಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಂಭೀರ ಆರೋಪ ಮಾಡುತ್ತಿದ್ದಾರೆ. ಇನ್ನು ಮದುವೆ ಸಂದರ್ಭದಲ್ಲಿ ಎರಡುವರೆ ಲಕ್ಷ ಹಣ ಬೈಕ್ ಸಹ ಕೊಟ್ಟಿದ್ದರಂತೆ ಇತ್ತೀಚಿಗೆ ಜಮೀನು ಬಂದ ಹಣ ಕೊಡುವಂತೆ ಪ್ರತಿದಿನ ಪೀಡಿಸುತ್ತಿದ್ದರಂತೆ. ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಹೀಗಾಗಿರಬಹುದೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಇನ್ನು ಮಗಳ ಸಾವಿಗೆ ನ್ಯಾಯ ಕೊಡಿಸಿಕೊಳ್ಳುವಂತೆ ತಂದೆ ಮಾಧ್ಯಮಗಳ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ.
PublicNext
13/08/2022 08:54 am