ಆನೇಕಲ್: ಕಳೆದ ಎರಡು ಮೂರು ತಿಂಗಳಿಂದ ಆನೇಕಲ್ ಉಪ ವಿಭಾಗದಲ್ಲಿ ಬೈಕ್ ಕಳ್ಳತನ, ಮನೆಗಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ಸಾಕಷ್ಟು ತಲೆ ನೋವಾಗಿ ಪರಿಣಮಿಸಿತ್ತು. ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿ ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಗ್ಯಾಂಗ್ ನ ಬಂಧಿಸಿದ್ದಾರೆ.
ಬೆಂಗಳೂರು ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ರಾಣೆಯಲ್ಲಿ ಬಂಧಿತ ಆರೋಪಿಗಳಿಂದ ಬರೋಬ್ಬರಿ 65 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನ ಹಾಗೂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ..
ಇನ್ನೂ ಆನೇಕಲ್ ಉಪ ವಿಭಾಗದ ಹೆಬ್ಬಗೋಡಿ, ಸೂರ್ಯ ನಗರ, ಅತ್ತಿಬೆಲೆ, ಸರ್ಜಾಪುರ, ಬನ್ನೇರುಘಟ್ಟ ಸೇರಿದಂತೆ ಕುಖ್ಯಾತ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಹೆಬ್ಬಗೋಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳಾದ ತಮಿಳುನಾಡು ಮೂಲದ ಮದಿ ಅಳಗನ್ ಹಾಗೂ ವಿನೋದ್ ಕುಮಾರ್ ಬಂಧಿತ ಆರೋಪಿಗಳು.
ಸೂರ್ಯ ನಗರ ಪೊಲೀಸರ ಕಾರ್ಯಾಚರಣೆಯಿಂದಾಗಿ ಹದಿಮೂರು ವಿವಿಧ ಮಾದರಿಯ ಬೈಕ್ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ ಸರ್ಜಾಪುರ ಪೊಲೀಸರಿಂದ ಬೈಕ್ ಕಳ್ಳತನ ಮಾಡುತ್ತಿದ್ದ ಶಶಿಕುಮಾರ್, ಅಂಜಿ, ಇರ್ಫಾನ್, ಅರವಿಂದ್ ನನ್ನ ಬಂಧಿಸಲಾಗಿದೆ. ಇನ್ನು ಬಂಧಿತ ಆರೋಪಿಗಳು ಪೊಲೀಸ್ ತನಿಖೆಯ ವೇಳೆ ಶೋಕಿಗಾಗಿ ಕಳ್ಳತನ ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡ ಬೈಕ್ ಗಳನ್ನು ಮಾಲೀಕರಿಗೆ ಹಸ್ತಾಂತರ ಮಾಡಲಾಯಿತು.ಈ ಬಗ್ಗೆ ಬೆಂಗಳೂರು ಗ್ರಾಮಾಂತರ ನೂತನ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
-ಹರೀಶ್ ಗೌತಮನಂದ, ಪಬ್ಲಿಕ್ ನೆಕ್ಸ್ಟ್, ಆನೇಕಲ್
PublicNext
24/08/2022 07:33 pm