ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪ್ರಜೆಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆಗಳಾದ ಓಬಿನಾ ಪ್ರೊಮಿಸ್ ವಿಕ್ಟರ್, ಓಸಾಸ್ ಮೋಸೆಸ್, ಮರ್ಕ ಮೌರಿಸ್ ಬಂಧಿತ ಆರೋಪಿಗಳು.
ಕಾರಿನಲ್ಲಿ ಎಂಡಿಎಂಎ ಮಾತ್ರೆಗಳನ್ನ ಸಪ್ಲೈ ಮಾಡುವ ವೇಳೆ ಸಿಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ. ಇನ್ನು ಬಂಧಿತ ಆರೋಪಿಗಳ ಪೈಕಿ ಒಬ್ಬ 2021ರಲ್ಲಿ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅರೆಸ್ಟ್ ಆಗಿ ಜೈಲು ಸೇರಿದ್ದ. ಸದ್ಯ ಬಂಧಿತರಿಂದ 60 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದೆ.
PublicNext
25/08/2022 04:08 pm