ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ವರ್ಷದಿಂದ ಹಲ್ಲುಕಿತ್ತ ಹಾವಿನಂತಾಗಿದ್ದ ಎಸಿಬಿ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದ್ದು, ಸಾರ್ವಜನಿಕರಿಂದ ಬರುವ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ಎಡಿಪಿಜಿ ಪ್ರಶಾಂತ್ ಕುಮಾರ್ ಠಾಕೂರ್ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ಮೊದಲಿನಂತೆ ಲೋಕಾಯುಕ್ತ ಕಾರ್ಯನಿರ್ವಹಿಸಲಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿರುವ ಲೋಕಾಯುಕ್ತಾ ಇನ್ಮುಂದೆ ಬರುವ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಯಾ ವಿಭಾಗದ ಎಸ್ಪಿ, ಡಿವೈಎಸ್ಪಿ ಹಾಗೂ ಇನ್ ಸ್ಪೆಕ್ಟರ್ ಗಳಿಗೆ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.
ಪ್ರತಿಯೊಂದು ಜಿಲ್ಲೆಯಲ್ಲಿಯೂ ಲೋಕಾಯುಕ್ತ ಎಸ್ಪಿ ಕಚೇರಿಗಳಿವೆ. ಅದೇ ಕಚೇರಿಗಳೇ ಇದೀಗ ಲೋಕಾ ಪೊಲೀಸ್ ಠಾಣೆಯಾಗಿ ತಲೆ ಎತ್ತಲಿದೆಆಯಾ ಜಿಲ್ಲೆಗಳಲ್ಲಿ ಬರುವ ದೂರುಗಳನ್ನು ಸಾರ್ವಜನಿಕರು ಅಲ್ಲೇ ನೀಡಬಹುದಾಗಿದೆ. ಬೆಂಗಳೂರು ನಗರ ಪೊಲೀಸ್ ಠಾಣೆಯು ಲೋಕಾಯುಕ್ತ ಪ್ರಧಾನ ಕಚೇರಿಯಿಂದ ಕಾರ್ಯನಿರ್ವಹಿಸಲಿದೆ.
Kshetra Samachara
26/08/2022 10:46 pm