# ಯಲಹಂಕ: ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ಚಿಕ್ಕಜಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ರವಿ ಎಂಬಾತ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾನೆ. ದೂರುದಾರರಿಂದ ಹಣ ಪಡೆಯುವಾಗ ಸಿಕ್ಕಿ ಬಿದ್ದ ರವಿ ಇದೀಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ.
ಅನ್ಯಾಯದ ವಿರುದ್ಧ ಪಿರ್ಯಾದುದಾರರು ದೂರು ದಾಖಲಿಸಲು ಬಂದಾಗ ಪೊಲೀಸ್ ಪೇದೆ ರವಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಸದ್ಯ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ರವಿಯನ್ನ ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
PublicNext
07/10/2022 10:38 am