ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಸಾಹಿತ್ಯ ಪರಿಷತ್ತು ಹೆಜ್ಜೆ ಗುರುತು ಪುಸ್ತಕ ಬಿಡುಗಡೆ

ಆನೇಕಲ್ : ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಮೇ ತಿಂಗಳ ಕಾರ್ಯಕ್ರಮಗಳ ಹೆಜ್ಜೆಗುರುತು ಸಂಚಿಕೆಯ ಬಿಡುಗಡೆ ಕಾರ್ಯಕ್ರಮವನ್ನು ಬೊಮ್ಮಸಂದ್ರ ಕೈಗಾರಿಕಾ ಸಂಘದ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

ಇನ್ನು ಈ ಸಂಚಿಕೆಯನ್ನು ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ ಪ್ರಸಾದ್ ರವರು ಬಿಡುಗಡೆ ಮಾಡಿದರು ಬಿ ಐ ಎ ಪದಾಧಿಕಾರಿ ಸಂಜೀವ ಸಾವಂತ್ ಹೆಬ್ಬಗೋಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗಣ್ಣಬಿ ಐ ಎ ಮ್ಯಾನೇಜರ್ ಶಿವಕುಮಾರ್ ಕಸಾಪ ಅಧ್ಯಕ್ಷ ಆದೂರು ಪ್ರಕಾಶ್ ಶಿಕ್ಷಕ ಕೆ. ಚಂದ್ರಶೇಖರ್ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿ ಐ ಎ ಅಧ್ಯಕ್ಷ ಪ್ರಸಾದ್ ಬೇರೆ ರಾಜ್ಯದ ಜನರನ್ನು ಅನ್ಯರೆಂದು ಜರೆಯದಿರಿ ಅವರು ನಮ್ಮವರೆಂದು ವಿಶ್ವಾಸಕ್ಕೆ ತೆಗೆದುಕೊಂಡು ಕನ್ನಡವನ್ನು ಕಲಿಸಿ ಎಂದು ಸಲಹೆ ನೀಡಿದರು.

ಕನ್ನಡನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ ಆದರೂ ಹೊರ ರಾಜ್ಯಗಳಿಂದ ಕಾರ್ಮಿಕರು ರಾಜ್ಯಕ್ಕೆ ಬಾರದಿದ್ದರೆ ಕಾರ್ಮಿಕರ ಕೊರತೆ ಎದುರಾಗುತ್ತದೆ ಅವರಿಗೆ ಕನ್ನಡವನ್ನು ಕಲಿಸಿ ಕನ್ನಡದ ಬಗ್ಗೆ ಆಸಕ್ತಿಯನ್ನು ಮೂಡಿಸುವ ತುರ್ತು ಕೆಲಸವಾಗಬೇಕಾಗಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕು ಬೊಮ್ಮಸಂದ್ರ ಕೈಗಾರಿಕಾ ಸಂಘ ಕನ್ನಡವನ್ನು ಬೆಳೆಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿದ್ದೇವೆ.

ಕೈಗಾರಿಕೆಗಳೆಲ್ಲ ಕನ್ನಡಮಯವಾಗಿ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯವನ್ನು ನೀಡಿದಾಗಲೇ ಪ್ರತಿಯೊಬ್ಬ ಕಾರ್ಮಿಕನಿಗೂ ನೆಲ-ಜಲ-ಭಾಷೆಯ ಬಗ್ಗೆ ಅಭಿಮಾನ ಹೆಚ್ಚುವುದು ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಅಧ್ಯಕ್ಷರು ಹಾಗೂ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

14/06/2022 07:54 pm

Cinque Terre

734

Cinque Terre

0

ಸಂಬಂಧಿತ ಸುದ್ದಿ