ಬೆಂಗಳೂರು: ಆನೇಕಲ್ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ದಸರಾ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಇದು ವೇಳೆ ಮಾತನಾಡಿದ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಡಾ, ಜಿ ಮುನಿರಾಜು ಕನ್ನಡ ನಾಡು ತಾರೆಗಳು ನೆಲೆಸಿರುವ ಬಿಡು ಇದನ್ನು ಕನ್ನಡಿಗರೆಲ್ಲರೂ ಸೇರಿ ಶ್ರೀಮಂತಗೊಳಿಸಬೇಕಾಗಿದೆ ಎಂದು ತಿಳಿಸಿದರು ಅಲ್ಲದೆ ಇಂದಿನ ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳು ಉಳಿದುಕೊಳ್ಳಲು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿ ಆಡಳಿತದಲ್ಲಿ ಕನ್ನಡ ಭಾಷೆಯನ್ನ ಅನುಷ್ಠಾನಕ್ಕೆ ತರಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು
ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ತಿಲಕ್ ಗೌಡ ಮಾತನಾಡಿ ಕನ್ನಡ ಭಾಷೆಯ ವಿಶಾಲತೆಯನ್ನು ಹಳ್ಳಿಹಳ್ಳಿಗೂ ವಿಸ್ತರಿಸಬೇಕಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನ ಆಯೋಜನೆ ಮಾಡಬೇಕು ಎಂದು ತಿಳಿಸಿದರು.
Kshetra Samachara
04/10/2022 07:40 pm