ಆನೇಕಲ್:ಪೋಷಕರು ಮಕ್ಕಳಿಗೆ ಆಸ್ತಿಯನ್ನು ಮಾಡದೇ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಿ, ಮಕ್ಕಳ ಕಲಿಕೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಾವು ಕೊಡ್ತೀವಿ ಆದಷ್ಟು ಪೋಷಕರು ಸರ್ಕಾರಿ ಶಾಲೆಗೆ ಕೀಳರಿಮೆಯನ್ನು ತೋರದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ವೆಂಕಟಸ್ವಾಮಿ ತಿಳಿಸಿದರು.
ಆನೇಕಲ್ ತಾಲ್ಲೂಕಿನ ಮರಸೂರು ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಕ್ಕಳ ಮನೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಇನ್ನು ಇದೇ ಸಂಧರ್ಭದಲ್ಲಿ ಮಕ್ಕಳಿಗೆ ಜನ ಪ್ರತಿನಿಧಿಗಳು ಗುಲಾಬಿ ಹೂವು ಸಿಹಿ ಹಂಚುವ ಮೂಲಕ ಶಾಲೆಗೆ ಭವ್ಯ ಸ್ವಾಗತ ಕೋರಿದರು.
ಇನ್ನು ಇದೇ ಸಂಧರ್ಭದಲ್ಲಿ ಮಕ್ಕಳ ಮನೆ ಶಾಲೆಯ ರೂವಾರಿ ಮರಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ್ ರೆಡ್ಡಿ ಹಾಗು ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ ಜೆ.ಆರ್. ಸಂಸ್ಥೆಯ ಮುಖ್ಯಸ್ಥ ಜಗದೀಶ್ ರೆಡ್ಡಿ ರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು ಮತ್ತು ವಯೋ ನಿವೃತ್ತಿ ಗೊಂಡ ವಾಟರ್ ಮೆನ್ ಮುನಿಸ್ವಾಮಿರವರನ್ನು ಸಹ ಗೌರವಿಸಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಾಪುರ ರಾಮಚಂದ್ರ, ಮರಸೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ. ಮರಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರಭಾಕರ್ ರೆಡ್ಡಿ, ಗಣ್ಯಾತಿಗಣ್ಯರು ಭಾಗಿಯಾಗಿದ್ದರು.
Kshetra Samachara
01/06/2022 08:28 pm