ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಸಂಭ್ರಮದ ಗಣೇಶೋತ್ಸವ ಆಚರಿಸಲಾಗಿದೆ. ನಗರ ಸಭೆ ವತಿಯಿಂದ 78 ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದ್ದು, 300ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಕೆರೆ ಕುಂಟೆಗಳಲ್ಲಿ ಪರಿಸರ ಮಾಲಿನ್ಯ ತಡೆಯುವ ಕಾರಣಕ್ಕೆ ಗಣೇಶ ಮೂರ್ತಿ ವಿಸರ್ಜನೆಗೆ ನಗರಸಭೆಯಿಂದ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಕಡೇ ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿತ್ತು, ಗಣೇಶನ ಹಬ್ಬದ ದಿನ 250 ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜಿಸಲಾಗಿದೆ. ದೊಡ್ಡ ಗಾತ್ರದ ಗಣೇಶ ಮೂರ್ತಿ ವಿಸರ್ಜಿಸಲು ನಾಗರಕೆರೆ ಬಳಿ ವಿಸರ್ಜನೆ ಕೇಂದ್ರ ತೆರೆಯಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗಣೇಶ ಮೂರ್ತಿಗಳನ್ನ ಈ ಸ್ಥಳದಲ್ಲಿ ವಿಸರ್ಜನೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ 300ಕ್ಕೂ ಗಣೇಶ ಮೂರ್ತಿಗಳ ವಿಸರ್ಜನೆಯಾಗಿವೆ.
Kshetra Samachara
06/09/2022 02:49 pm