ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಕೆ.ಆರ್. ಪುರದ ಪ್ರಥಮ ದರ್ಜೆ ಕಾಲೇಜಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ 73ನೇ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲಾಯಿತು. ದಂಡಾಧಿಕಾರಿ ಅಜಿತ್ ಕುಮಾರ್ ರೈ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .
ಕೆ.ಆರ್. ಪುರ ಪೊಲೀಸರು, ಪ್ರಥಮ ದರ್ಜೆ ಎನ್ ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆದು, ಧ್ವಜವಂದನೆ ಸಲ್ಲಿಸಲಾಯಿತು. ಯೋಧರ ಶೌರ್ಯ ಸಾರುವ ತುಣುಕನ್ನು ಕಾಲೇಜು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಈ ಸಂದರ್ಭ ಪುರಸ್ಕಾರ ವಿತರಿಸಲಾಯಿತು.
Kshetra Samachara
26/01/2022 01:37 pm