ದೇವನಹಳ್ಳಿ: 73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ನನಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಬಹಳ ಅಭಿಮಾನವಿದೆ. ಜನರ ಹಿತವನ್ನು ಕಾಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಬದಲಾವಣೆಯಿಂದ ಯಾವುದೇ ರೀತಿಯ ಅಭಿವೃದ್ಧಿಗೆ ಹಿನ್ನಡೆ ಆಗುವುದಿಲ್ಲ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನದಂತೆ ನಮ್ಮ ಕರ್ತವ್ಯಗಳಲ್ಲಿ ನಿರತರಾಗಿದ್ದೇವೆ ಎಂದರು.
ಕೋವಿಡ್ ನಿಯಂತ್ರಣದ ಬಗ್ಗೆ ಮಾತನಾಡಿದ ಸಚಿವರು, ಕಳೆದ ನಾಲ್ಕು ದಿನದಿಂದ ಬೆಂಗಳೂರಿನಲ್ಲಿ ಕೊರೊನಾ ಕಡಿಮೆಯಾಗಲು ಪ್ರಾರಂಭವಾಗಿದೆ. ಬೆಂಗಳೂರಿಗೆ ಹೋಲಿಕೆ ಮಾಡಿದರೆ ಬೇರೆ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟದ ಏರಿಕೆಯಿದೆ. ಸಮಾಧಾನಕರ ವಿಷಯವೆಂದರೆ ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಶೇ. 1ರಿಂದ 2ರಷ್ಟು ಇರುವುದರಿಂದ ಯಾವುದೇ ಆತಂಕ ಇಲ್ಲ ಎಂದು ತಿಳಿಸಿದರು.
Kshetra Samachara
26/01/2022 01:56 pm