ಬೆಂಗಳೂರು: ರಾಮನವಮಿ ನಿಮಿತ್ತ ಏಪ್ರಿಲ್ 10 ರಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಶ್ರೀರಾಮ ನವಮಿ ಪ್ರಯುಕ್ತ ಕಸಾಯಿಖಾನೆ, ಪ್ರಾಣಿ ಹತ್ಯೆ, ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 3 ರಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರ ಸುತ್ತೋಲೆಯನ್ನು ಆಧರಿಸಿ ಈ ಆದೇಶ ಹೊರಡಿಸಲಾಗಿದ್ದು, ಈ ನಿಯಮ ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Kshetra Samachara
09/04/2022 11:08 am