ಕಳೆದ ಬಾರಿ ಅರಿಷಿಣ ಗಣಪ ಅಭಿಯಾನ ನಡೆಸುವುದರೊಂದಿಗೆ ಗಿನ್ನಿಸ್ ವಿಶ್ವ ದಾಖಲೆ ಮೆರೆದಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಗಣೇಶ ಉತ್ಸವ ಸಮಿತಿ ಈ ಬಾರಿ ಮಣ್ಣಿನ ಗಣಪ ತಯಾರು ಮಾಡುಲು ಮುಂದಾಗಿದೆ.
ಮಣ್ಣಿನ ಗಣಪ ಅಭಿಯಾನದ ಮೂಲಕ ಪರಿಸರ ಸ್ನೇಹಿ ಗಣಪ ಹಬ್ಬ-2022 ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಗಣೇಶ ಉತ್ಸವ ಸಮಿತಿಯ ನಂದೀಶ್ ಎಸ್. ಮರಿಯಪ್ಪ ತಿಳಿಸಿದ್ದಾರೆ.
ಪರಿಸರ ಮಾಲಿನ್ಯವನ್ನು ತಡೆಗಟದಟುವ ನಿಟ್ಟಿನಲ್ಲಿ ಈ ಬಾರಿಯೂ ಪಿಒಪಿ ಗಣೇಶ ಮೂರ್ತಿಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು ಬಣ್ಣ ರಹಿತ ಮತ್ತು ಪರಿಸರ ಸ್ನೇಹಿಯಾದ ಮಣ್ಣಿನ ಸೀಡ್ಸ್ ಗಣಪನನ್ನೇ ಬಳಸಬೇಕು ಎಂದು ಮನವಿ ಮಾಡಿದ್ದಾರೆ.
ಆಗಸ್ಟ್ 28 ರಂದು ಮಧ್ಯಾಹ್ನ 3 ಗಂಟೆಗೆ ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ಶ್ರೀ ವಿದ್ಯಾರಣ್ಯ ಯುವಕ ಸಂಘ ಮತ್ತು ಬೆಂಗಳೂರು ಗಣೇಶ ಉತ್ಸವ ಸಂಘಟನೆಯ ಸಹಭಾಗಿತ್ವದಲ್ಲಿ ಹತ್ತು ಸಾವಿರ ಮಣ್ಣಿನ ಗಣಪನನ್ನು ತಯಾರಿಸಲು ತರಬೇತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸುವವರಿಗೆ ಮಣ್ಣಿನ ಗಣಪನನ್ನು ತಯಾರಿಸಲು ಸ್ಥಳದಲ್ಲೇ ಕಲಿಸಿಕೊಡಲಾಗುತ್ತದೆ ಎಂದಿದ್ದಾರೆ.
PublicNext
18/08/2022 02:39 pm