ಬೆಂಗಳೂರು: ಬೆಂಗಳೂರಿನ ಕರಗ ಮಹೋತ್ಸವ ಸುಸೂತ್ರವಾಗಿ ನೆರವೇರಿದೆ. ಹಳದಿ ಸೀರೆ, ಬಳೆ ತೊಟ್ಟ ಧರ್ಮರಾಯಸ್ವಾಮಿ ದೇವಸ್ಥಾನದ ಅರ್ಚಕ ಎ. ಜ್ಞಾನೇಂದ್ರ ಅವರು ಶನಿವಾರ ಮಧ್ಯರಾತ್ರಿ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ, ಸಮೀಪದ ಶಕ್ತಿ ಗಣಪತಿ ಮತ್ತು ಮುತ್ಯಾಲಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸ್ವೀಕರಿಸಿ, ಬಳಿಕ ನೂರಾರು ವೀರ ಕುಮಾರರು ಹಾಗೂ ಭಕ್ತರ ನಡುವೆ ದರ್ಶನ ನೀಡುತ್ತ ನಗರ ಪ್ರದಕ್ಷಿಣೆಗೆ ಸಾಗಿದರು.
ವೀರಕುಮಾರರು ಕೈಯಲ್ಲಿ ಕತ್ತಿ ಹಿಡಿದು ಕರಗ ರಕ್ಷಣೆ ಕಾರ್ಯದಲ್ಲಿ ತೊಡಗಿದ್ದರೆ, ದೇವಿಯ ನಾಮಸ್ಮರಣೆ ಮಾಡುತ್ತಾ ಭಕ್ತರು ಕರಗವನ್ನು ಹಿಂಬಾಲಿಸಿದರು. ಮಧ್ಯರಾತ್ರಿ ಶಕ್ತ್ಯೋತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದ ಭಾವೈಕ್ಯ ಮೆರೆಯುವ ಕರಗ ಮಹೋತ್ಸವ ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ.
PublicNext
17/04/2022 05:18 pm