ಬೆಂಗಳೂರು: ಆನೇಕಲ್ ತಾಲ್ಲೂಕಿನ ಬ್ಯಾಡಗದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪಟಾಲಮ್ಮ ದೇವಾಲಯದ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮ ಅಂಗವಾಗಿ ಗ್ರಾಮದ ಮಹಿಳೆಯರು ದೀಪವನ್ನು ಬೆಳಗಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಜೊತೆಗೆ ಪಟಾಲಮ್ಮ ಉತ್ಸವ ಮೂರ್ತಿ ಮತ್ತು ಮುನೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದ ಮೇಲೆ ಕೂರಿಸಿ ಮೆರವಣಿಗೆ ನಡೆಸಲಾಯಿತು.
ಇನ್ನು ಇದೇ ಸಂಧರ್ಭದಲ್ಲಿ ಕೋಲಾಟ ಕಾರ್ಯಕ್ರಮ ಆಯೋಜಿಸಲಾಗಿತ್ತು, ವಿಶೇಷವಾಗಿ ಪಟಾಲಮ್ಮ ದೇವಾಲಯದ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮ ಅಂಗವಾಗಿ ದೇವಾಲಯಕ್ಕೆ ಮತ್ತು ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಬ್ಯಾಗಡೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಬೈರೇಗೌಡರು ಸೇರಿದಂತೆ ತಟ್ಟನಹಳ್ಳಿ ಗ್ರಾಮಸ್ಥರು ಮತ್ತು ಭಕ್ತರು ಭಾಗವಹಿಸಿದ್ದರು.
Kshetra Samachara
19/06/2022 10:05 pm