ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 15 ಜೋಡಿ

ದೊಡ್ಡಬಳ್ಳಾಪುರ: ಧಾರ್ಮಿಕ ದತ್ತಿ ಇಲಾಖೆಯ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನೇರವೇರಿತು. ಸಾಮೂಹಿಕ ವಿವಾಹದಲ್ಲಿ 15 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಬಡವರ ಮದುವೆ ಖರ್ಚಿನ ಹೊರೆ ಕಡಿಮೆ ಮಾಡುವ ಸಲುವಾಗಿ ಸರ್ಕಾರ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಇಂದು ಸರಳವಾಗಿ ಸಪ್ತಪದಿ ಸಾಮೂಹಿಕ ವಿವಾಹ ನೆರವೇರಿತು. ಇಂದು ಬೆಳಗ್ಗೆ 9 ರಿಂದ 9:50ರವರೆಗಿನ ಕನ್ಯಾ ಲಗ್ನದಲ್ಲಿ 15 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಅಪರ ಜಿಲ್ಲಾಧಿಕಾರಿ ವಿಜಯ ಈ ರವಿಕುಮಾರ್, ತಹಶೀಲ್ದಾರ್ ಮೋಹನಕುಮಾರಿ ನವಜೋಡಿಗಳಿಗೆ ಶುಭ ಹಾರೈಸಿದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಮದುವೆ ಖರ್ಚಿಗಾಗಿ ವರನಿಗೆ 5 ಸಾವಿರ ರೂ. ವಧುವಿಗೆ 10 ಸಾವಿರ ನಗದು ಹಣ ಕೊಡಲಾಗಿದೆ. 40 ಸಾವಿರ ಮೌಲ್ಯದ ಚಿನ್ನದ ತಾಳಿ ಮತ್ತು ಎರಡು ಚಿನ್ನದ ಗುಂಡು ಕೊಡಲಾಗಿದೆ.

Edited By : Nagesh Gaonkar
PublicNext

PublicNext

25/08/2022 04:06 pm

Cinque Terre

25.11 K

Cinque Terre

0

ಸಂಬಂಧಿತ ಸುದ್ದಿ