ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಿಳಾ ಸ್ವಸಹಾಯ ಸಂಘಗಳ ಉತ್ತೇಜನಕ್ಕಾಗಿ ಸಂಜೀವಿನಿ ಮಾಸಿಕ ಸಂತೆ ಮೇಳ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವತಿಯಿಂದ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಮಹದೇವಪುರ ಕ್ಷೇತ್ರದ ಕಿತಗನೂರು ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು.

ಸಂತೆ ಮೇಳದಲ್ಲಿ ಭಾಗಿಯಾಗಿ ಮಾತನಾಡಿದ ಗ್ರಾ,ಪಂ ಅಧ್ಯಕ್ಷೆ ಲಕ್ಷ್ಮಿ ರಮೇಶ್ ಅವರು, ಮಹಿಳಾ ಒಕ್ಕೂಟಗಳಿಂದ ಸ್ವಸಹಾಯ ಸಂಘಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕಿತಗನೂರು ಗ್ರಾಮದಲ್ಲಿ ನಮ್ಮೂರ ಸಂತೆ ಎಂಬ ಕಾರ್ಯಕ್ರಮವನ್ನು ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ.

ಇಂತಹ ಕಾರ್ಯಕ್ರಮಗಳು ಮಹಿಳೆಯರಿಗೆ ಉತ್ತಮ ವೇದಿಕೆಯಾಗಲಿದೆ. ಮನೆಯಿಂದಲೇ ತಯಾರಿಸಲ್ಪಟ್ಟ ಆಹಾರ ಪದಾರ್ಥಗಳು , ಸೊಪ್ಪು ತರಕಾರಿ, ಸಾಂಬಾರು ಪದಾರ್ಥಗಳು ,ಸಾವಯವ ರಾಸಾಯನಿಕಗಳು ಈ ಮೇಳದ ಮೂಲಕ ನೇರವಾಗಿ ಗ್ರಾಹಕರಿಗೆ ತಲುಪಿಸಿದಂತಾಗುತ್ತದೆ ಎಂದು ಹೇಳಿದರು.

Edited By : Shivu K
Kshetra Samachara

Kshetra Samachara

03/02/2022 10:58 am

Cinque Terre

938

Cinque Terre

0

ಸಂಬಂಧಿತ ಸುದ್ದಿ