ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಉದ್ಘಾಟನೆ ಹಾಗೂ ಕಳಸಾರೋಹಣ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕು ನಗರೂರಿನಲ್ಲಿರುವ ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಉದ್ಘಾಟನೆ ಹಾಗೂ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳ ಪೀಠಾರೋಹಣ ಸಮಾರಂಭದ ಕುರಿತು ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಇನ್ನೂ ಪ್ರಥಮ ಪೀಠಾಧಿಪತಿಯಾಗಿರುವ ಶ್ರೀ ಪೂರ್ಣಾನಂದ ಪುರಿ ಸ್ವಾಮೀಜಿ (ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ) ಮಾತನಾಡಿ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಕನಕ ಗುರುಪೀಠ, ಮಾದರ ಚೆನ್ನಯ್ಯ ಗುರುಪೀಠ ಸೇರಿದಂತೆ ಎಲ್ಲಾ ವರ್ಗಗಳ ಸುಮಾರು 20 ಮಠಗಳ ಮಠಾಧೀಶರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸಿದ್ರೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಠದ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಶೀರ್ವಾದದ ನುಡಿಗಳನ್ನಾಡಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಇತರೆ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಅಲ್ಲದೆ ಪೀಠಾರೋಹಣ ಕಾರ್ಯಕ್ರಮಗಳು ಆರಂಭಕ್ಕೂ ಮುಂಚೆ ಎಲ್ಲಾ ಪೂಜ್ಯರು ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪೂರ್ಣಕುಂಭ ಕುಂಭ ಸ್ವಾಗತದ ಮೆರವಣಿಗೆಯೊಂದಿಗೆ ವೇದಿಕೆಗೆ ಆಹ್ವಾನಿಸಿ ಪಟ್ಟಾಭಿಷೇಕ ನಡೆಸಿ ಕೊಡಲಿದ್ದಾರೆ. ಬಳಿಕ ಮಠಾಧೀಶರ, ಗಣ್ಯವ್ಯಕ್ತಿಗಳ ಭಾಷಣ ನಡೆಯಲಿದೆ ಎಂದರು.

Edited By : Shivu K
Kshetra Samachara

Kshetra Samachara

13/05/2022 01:02 pm

Cinque Terre

3.62 K

Cinque Terre

0

ಸಂಬಂಧಿತ ಸುದ್ದಿ