ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇಂಡಿಯನ್ ಆರ್ಟಿಷನ್ ಬಜಾರ್; ಚಿತ್ರಕಲಾ ಪರಿಷತ್ತಿನಲ್ಲಿ ಕಲೆಗಳ ಅನಾವರಣ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇಂಡಿಯನ್ ಆರ್ಟಿಷನ್ ಬಜಾರ್ ಅನ್ನು ಇಂದು ನಟಿಯರಾದ ಗ್ರೀಷ್ಮಾ ಗೌಡ ಮತ್ತು ನಂದಿನಿ ಶಂಕರ್ ಉದ್ಘಾಟಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತಿದೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‌ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿದೆ. ಈ ಮೇಳ ಇಂದಿನಿಂದ ಜೂನ್ 12 ರ ವರೆಗೆ ನಡೆಯಲಿದೆ.

Edited By : Vijay Kumar
Kshetra Samachara

Kshetra Samachara

03/06/2022 07:21 pm

Cinque Terre

694

Cinque Terre

0

ಸಂಬಂಧಿತ ಸುದ್ದಿ