ವರದಿ : ಬಲರಾಮ್ ವಿ
ಬೆಂಗಳೂರು: ಪೂರ್ವ ತಾಲೂಕು ಆಡಳಿತ ಕಚೇರಿಯ ವತಿಯಿಂದ ಕೆಆರ್ ಪುರದ ತಹಶೀಲ್ದಾರರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಹೆಸರಿನ ದ್ವಾರ ಬಾಗಿಲು ಹಾಗೂ ಸುಮಾರು 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಿಸುವುದಾಗಿ ತಿಳಿಸಿದರು.
ಕೆಂಪೇಗೌಡರು ಕಟ್ಟಿದ ಬೆಂಗಳೂರಲ್ಲಿ ಹಲವಾರು ಜಾತಿ ಜನಾಂಗಗಳು ವಾಸಿಸಲು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ ಎಂದರು. ಹೊರಮಾವು ವಾರ್ಡನ ಆಗರ ಕೆರೆಯಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ವಾದ್ಯಗಳ ಮೂಲಕ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು...
Kshetra Samachara
27/06/2022 08:17 pm