ವರದಿ- ಬಲರಾಮ್ ವಿ
ಬೆಂಗಳೂರು: ಕರ್ನಾಟಕ ಸರ್ಕಾರದ ವನ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜಯಕರ್ನಾಟಕ ಜನಪರ ವೇದಿಕೆ ಮತ್ತು ಐ ಕೇರ್ ಬ್ರಿಗೇಡ್ ವತಿಯಿಂದ ಮಹದೇವಪುರ ಕ್ಷೇತ್ರದ ಮಂಡೂರು ಮತ್ತು ಜ್ಯೋತಿಪುರದಲ್ಲಿ ಗಿಡನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಐ ಕೇರ್ ಬ್ರಿಗೇಡ್ ಸಂಸ್ಥೆಯ ಸಂಸ್ಥಾಪಕರಾದ ಬಿ.ಗುಣರಂಜನ್ ಶೆಟ್ಟಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಜೆ .ಶ್ರೀನಿವಾಸ ಅವರು ಕರ್ನಾಟಕ ಸರ್ಕಾರದ ವನ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅರಣ್ಯ ಇಲಾಖೆಯ ಮೀಸಲು ಪ್ರದೇಶದಲ್ಲಿ ನೂರಾರು ಗಿಡಗಳನ್ನು ನೆಡಲಾಗುತ್ತದೆ ಎಂದರು.ಪ್ರತಿಯೊಂದು ಜೀವಿವೂ ಉಸಿರಾಟ ಹಾಗೂ ಮಳೆ ಬರುವಿಕೆಗಾಗಿ ಗಿಡಗಳನ್ನು ನೆಡುವಂತಾ ಕಾರ್ಯ ಪ್ರತಿದಿನವಾಗಬೇಕೆಂದರು.
ಮುಂದಿನ ದಿನಗಳಲ್ಲಿ ಸರ್ಕಾರದ ಜಾಗಗಳನ್ನು ಒತ್ತುವರಿ ತಡೆದು ಮರಗಳನ್ನು ಬೆಳೆಸಬೇಕೆಂದು ಹೇಳಿದರು.. ಈ ವೇಳೆ ವೇದಿಕ ಸದಸ್ಯರು, ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
PublicNext
06/07/2022 09:47 pm