ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶನಿವಾರ ಹಿಂದೂಗಳಿಗೆ ಪವಿತ್ರ ದಿನ. ಮೊದಲ ಶ್ರಾವಣ ಶನಿವಾರಕ್ಕಾಗಿ ಮಧುರೆ ಶ್ರೀ ಶನಿ ಮಹಾತ್ಮ ದೇವಸ್ಥಾನ ಸಿಂಗಾರಗೊಂಡಿದೆ. ನಾಳೆ 25 ಸಾವಿರಕ್ಕೂ ಹೆಚ್ಚು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶ್ರೀ ಶನಿ ಮಹಾತ್ಮ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ. ಶನಿವಾರದಂದ್ದು ಕ್ಷೇತ್ರದಲ್ಲಿ ಭಕ್ತ ಸಮೂಹವೇ ಇರುತ್ತೆ. ಅಂದು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.
ನಾಳೆ ಮುಂಜಾನೆ 3 ಗಂಟೆಯಿಂದಲೇ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಭಿಷೇಕ, ವಿಶೇಷ ಮಂಗಳಾರತಿ ನಡೆಯಲಿದೆ. ಭಕ್ತರಿಗೆ ಪ್ರಸಾದ ವಿತರಣೆ ಮತ್ತು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದ ವಿಶೇಷತೆಯಾಗಿ 25 ಸಾವಿರ ಲಡ್ಡು ತಯಾರಿಸಲಾಗಿದೆ. ಸುತ್ತಮುತ್ತಲಿನ ಜಿಲ್ಲೆಗಳ ಭಕ್ತರಲ್ಲದೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಿಂದಲೂ ಭಕ್ತಾದಿಗಳು ಕ್ಷೇತ್ರಕ್ಕೆ ಬರಲಿದ್ದಾರೆ.
PublicNext
29/07/2022 08:44 pm