ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನಲೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬಂದ ಭಕ್ತರು ದೇವರ ದರ್ಶನ ಪಡೆದು.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನಿ ಮಹಾತ್ಮ ದೇವಸ್ಥಾನದಲ್ಲೂ ಶ್ರಾವಣ ಶನಿವಾರದ ಆಚರಣೆ ನಡೆಯಿತು. ದೇವಸ್ಥಾನವನ್ನೂ ಹೂವಿನ ಅಲಂಕಾರದಿಂದ ಸಿಂಗಾರಗೊಳಿಸಲಾಯಿತು ಮುಂಜಾನೆ 3 ಗಂಟೆಯಿಂದಲೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬೆಳಗ್ಗಿನಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ದೇವರ ದರ್ಶನಕ್ಕೆ ಬಂದವರಿಗೆ ಸ್ಥಳೀಯ ಶಾಸಕ ಟಿ.ವೆಂಕಟರಮಣಯ್ಯ ಅನ್ನ ದಾಸೋಹ ವ್ಯವಸ್ಥೆ ಮಾಡಿದ್ದರು.
Kshetra Samachara
30/07/2022 10:56 pm