ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಂದ ಧ್ವಜಾರೋಹಣ ನೆರವೇರಿತು. ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಚಿವರಿಗೆ ಜಿಲ್ಲಾಧಿಕಾರಿ ಆರ್.ಲತಾ, ಶಾಸಕ ನಿಸರ್ಗ ನಾರಾಯಣಸ್ವಾಮಿ, ಸಂಸದ ಬಚ್ಚೇಗೌಡರು, ಸಾಥ್ ನೀಡಿದರು.
ಪೊಲೀಸರು ಮತ್ತು ವಿದ್ಯಾರ್ಥಿಗಳ ಪಥಸಂಚಲನ ಅತ್ಯದ್ಭುತವಾಗಿತ್ತು. ದೇವನಹಳ್ಳಿ ಮತ್ತು ಜಿಲ್ಲೆಯ ಸಾವಿರಾರು ಜನ ಸ್ವಾತಂತ್ರ್ಯೋವನ್ನು ಕಣ್ತುಂಬಿಕೊಂಡರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ.
Kshetra Samachara
15/08/2022 01:52 pm