ಆನೇಕಲ್: ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್.ಮಡಿವಾಳ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸ್ವಂತ ಹಣದಿಂದ ನೂತನವಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹೌದು. ಮಾಯಸಂದ್ರ ಗ್ರಾಮ ಪಂಚಾಯಿತಿ ಸದಸ್ಯ ಮಾಯಸಂದ್ರ ನಾರಾಯಣಪ್ಪ ಮಡಿವಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಜನಪ್ರಿನಿಧಿಗಳು, ಗಣ್ಯರು ಹಾಗೂ ಗ್ರಾಮಸ್ಥರು ಚಾಲನೆ ನೀಡಿದರು. ಮಾಯಸಂದ್ರ ಗ್ರಾಮ ಪಂಚಾಯಿತಿ ಸದಸ್ಯ ಮಾಯಸಂದ್ರ ನಾರಾಯಣಪ್ಪ ರವರ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
Kshetra Samachara
03/05/2022 08:58 pm