ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆ ವಾರ್ಡ್‌ನ ಶಾರದಾ ನಗರದಲ್ಲಿ ನೆನ್ನೆ ಗಾಳಿಸಹಿತ ಮಳೆಯಿಂದಾಗಿ ಸಿಗ್ನಲ್‌ನಲ್ಲಿ ನಿಂತಿದ್ದ ವೇಳೆ ಆಟೋರಿಕ್ಷಾದ ಮೇಲೆ ಮರವೊಂದು ಬಿದ್ದು ಸಂಪೂರ್ಣವಾಗಿ ಜಖಂ ಆಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿದೇ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಕೋಣನ ಕುಂಟೆ ಶಾರದಾ ನಗರದ ನಿವಾಸಿ ಚೆಲುವೆ ಗೌಡ ಎಂಬವರಿಗೆ ಸೇರಿದ್ದು, ಅವರ ಮನೆಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
Kshetra Samachara
10/05/2022 08:57 pm