ಹಿಜಾಬ್, ಪಠ್ಯ ಪರಿಷ್ಕರಣೆಯಂತಹ ವಿವಾದದಲ್ಲೇ ಮುಳುಗಿ ಹೋಗಿದ್ದ ಶಿಕ್ಷಣ ಇಲಾಖೆಯ ಹೊಸ ಆದೇಶ ಮತ್ತೊಂದು ವಿವಾದಕ್ಕೆ ಕಾರಣವಾಗುವಂತಿದೆ. ಹೌದು ಹಿಜಾಬ್, ಪಠ್ಯ ಪರಿಷ್ಕರಣೆ, ಪಠ್ಯ ಪುಸ್ತಕ ವಿತರಣೆ ವಿಳಂಬ ಸೇರಿದಂತೆ ನಾನಾ ಕಾರಣಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸುದ್ದಿಯಲ್ಲಿ ಇದೆ. ಒಂದೊಂದೇ ವಿವಾದಗಳು ತಣ್ಣಗಾಗುತ್ತಿರುವ ಬೆನ್ನಲ್ಲೇ ಇದೀಗ ಹೊಸ ತಲೆಬಿಸಿ ಸೃಷ್ಟಿಯಾಗಿದೆ.
ಅಂದಹಾಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇವತ್ತು ಹೊಸ ಆದೇಶ ಹೊರಡಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕದಿಂದ ಹೊರರಾಜ್ಯಕ್ಕೆ ಪ್ರವಾಸ ಹೊರಡುವ ವಿದ್ಯಾರ್ಥಿಗಳಿಗೆ ಹಿಂದಿ/ ಇಂಗ್ಲಿಷ್ ಭಾಷೆಯ ಜ್ಞಾನ ಕಡ್ಡಾಯ ಇರಬೇಕು ಎಂಬ ಸೂಚನೆ ನೀಡಲಾಗಿದೆ.
ಇದು ಮಕ್ಕಳಿಗೆ ಕಸಿವಿಸಿ ಉಂಟು ಮಾಡಿದ್ದು, ಶಿಕ್ಷಣ ಇಲಾಖೆಯ ಆದೇಶದಿಂದ ಹೊರ ರಾಜ್ಯ ಪ್ರವಾಸಕ್ಕೆ ಹೋಗಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ವಿಪರ್ಯಾಸವೆಂದರೆ ಇಂತಹ ಯಾವುದೇ ನಿರ್ಧಾರ ಅಥವಾ ನಿಯಮ ರಾಜ್ಯ & ಕೇಂದ್ರ ಸರ್ಕಾರದಲ್ಲ. ಕೇವಲ ಶಿಕ್ಷಣ ಇಲಾಖೆ ಅಧಿಕಾರಿಗಳದ್ದು. ಇಂತಹ ಗೊಂದಲಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟವಾಗಿ ತಿಳಿಸಿದ್ದಾರೆ.
ಗಣೇಶ್ ಹೆಗಡೆ, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
15/06/2022 08:24 pm